ADVERTISEMENT

ಪಾರದರ್ಶಕವಾಗಿರಲು ಸಿದ್ದರಾಮಯ್ಯ ದೊಡ್ಡ ಹೆಜ್ಜೆ: ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 15:25 IST
Last Updated 28 ಜುಲೈ 2024, 15:25 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಗದಗ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿರಲು ಸಿ.ಎಂ ಸಿದ್ದರಾಮಯ್ಯ ದೊಡ್ಡ ಹೆಜ್ಜೆ ಇರಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ತಮ್ಮ ಮೇಲೆ ತಾವೇ ತನಿಖೆ ಮಾಡಿದ್ದ ಉದಾಹರಣೆ ಇದೆಯಾ’ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಪ್ರಶ್ನಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಮುಡಾ ಪಾದಯಾತ್ರೆ ವಿರುದ್ಧ ಆಕ್ರೋಶ ಹೊರಹಾಕಿದರು.

‘ಪಾದಯಾತ್ರೆಗೆ ಮಾಜಿ ಸಿ.ಎಂ ಬಿ.ಎಸ್‌. ಯಡಿಯೂರಪ್ಪ ಚಾಲನೆ ನೀಡಲಿ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಲಿ. ಅದೇರೀತಿ ಸಂಸದರಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ ಶೆಟ್ಟರ್‌ ಮುಖಂಡತ್ವ ವಹಿಸಲಿ’ ಎಂದು ಹೇಳಿದರು.

ADVERTISEMENT

‘ತಪ್ಪು ಸಂದೇಶ ಸಾರುತ್ತಿರುವವರ ವಿರುದ್ಧವೇ ಈ ಹಿಂದೆ ಆರೋಪಗಳು ಕೇಳಿ ಬಂದಿದ್ದವು. ಆಗ ಅವರು ತನಿಖೆಗೆ ಮುಂದಾಗಿದ್ದರೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮೇಲೆ ಬಂದ ಆಪಾದನೆಗೆ ತನಿಖೆ ಮಾಡುತ್ತಿದ್ದಾರೆ. ಇಂತಹ ಉದಾಹರಣೆ ಇದೆಯೇ’ ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.