ADVERTISEMENT

ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಗ್ರಾಮಸ್ಥರಿಗೆ ನಾಟಿಕೋಳಿ ಔತಣಕೂಟ ನಾಳೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 15:41 IST
Last Updated 5 ಜನವರಿ 2026, 15:41 IST
   

ಗಜೇಂದ್ರಗಡ (ಗದಗ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ವದೇಗೋಳ ಗ್ರಾಮದಲ್ಲಿ ಜ.6ರಂದು ಗ್ರಾಮದ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ನಾಟಿಕೋಳಿ ಔತಣಕೂಟ ಏರ್ಪಡಿಸಲಾಗಿದೆ.

ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 7 ವರ್ಷ 240 ದಿನಗಳನ್ನು ಪೂರೈಸಿ ಡಿ.ದೇವರಾಜ ಅರಸು ಅವರ ದಾಖಲೆ ಮುರಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಔತಣಕೂಟ ಏರ್ಪಡಿಸಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಗ್ರಾಮಸ್ಥರಿಗೆ ಸುಮಾರು 70 ಕೆ.ಜಿ ನಾಟಿಕೋಳಿ ಮಾಂಸದ ಅಡುಗೆ ಮಾಡಿ ಊಣಬಡಿಸಲಿದ್ದಾರೆ. ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಬ್ಯಾನರ್‌ ಅಳವಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT