ADVERTISEMENT

ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 15:59 IST
Last Updated 17 ಆಗಸ್ಟ್ 2024, 15:59 IST
ಜಿ.ಎಸ್‌.ಪಾಟೀಲ
ಜಿ.ಎಸ್‌.ಪಾಟೀಲ   

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಭಾನುವಾರ ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆ ನಂತರ ಟಿಪ್ಪು ಸುಲ್ತಾನ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು. ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. 

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಬಿ.ಆರ್.ಯಾವಗಲ್, ಜಿ.ಎಸ್.ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ.ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ.ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.