ADVERTISEMENT

ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಗೊಂಡ ಸಿಎಂ ಸಿದ್ಧರಾಮಯ್ಯ: ಡಿ.ಡಿ. ಮೋರನಾಳ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 7:37 IST
Last Updated 8 ಜನವರಿ 2026, 7:37 IST
ಮುಂಡರಗಿ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭದಲ್ಲಿ ಅನ್ನ ಸಂತರ್ಪಣೆ ವಿತರಿಸಲಾಯಿತು 
ಮುಂಡರಗಿ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭದಲ್ಲಿ ಅನ್ನ ಸಂತರ್ಪಣೆ ವಿತರಿಸಲಾಯಿತು    

ಮುಂಡರಗಿ: ‘ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಗೊಂಡರು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ ಹರ್ಷ ವ್ಯಕ್ತಪಡಿಸಿದರು.

ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮು ಕಲಾಲ ಮಾತನಾಡಿ, ‘ರಾಜ್ಯದ ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಹಾಗೂ ಪಾರದರ್ಶಕ ಆಡಳಿತ ನಡೆಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದರು.

ADVERTISEMENT

ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಡಾ.ಬಿ.ಎಸ್. ಮೇಟಿ ಮಾತನಾಡಿದರು. ನಬಿಸಾಬ್ ಕೆಲೂರ, ಯಲ್ಲಪ್ಪ ಹೊಂಬಳಗಟ್ಟಿ, ಮುದಿಯಪ್ಪ ಕುಂಬಾರ, ದಶರಥ ಕುರಿ, ಗೋಣೇಶ ಮೇವುಂಡಿ, ದುದ್ದುಸಾಬ್ ಕಾತರಕಿ, ರಾಜಾಭಕ್ಷಿ ಬೆಟಗೇರಿ, ಲಕ್ಷ್ಯಪ್ಪ ಮಲ್ಲಾರ್ಜಿ, ರಾಮು ಭಜಂತ್ರಿ, ಪೀರವಾಲೆ, ಮುತ್ತು ಬಳ್ಳಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.