ಗದಗ: ‘ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಸಮಾರಂಭವನ್ನು ಸೆ.20ರಂದು ನಗರದ ಕನಕ ಭವನದಲ್ಲಿ ಹಮ್ಮಿಕೊಳ್ಳಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಮಾಜಿ ಶಾಸಕ ಹಾಗೂ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.
ನಗರದ ದೇವರಾಜ ಅರಸು ವಸತಿ ನಿಲಯದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಗಣ್ಯರು ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಕಾರ್ಯಕ್ರಮವನ್ನು ಇನ್ನಷ್ಟು ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಸಂಘಟಿತರಾಗಬೇಕು’ ಎಂದು ತಿಳಿಸಿದರು.
‘ಸಂಘಜೀವಿ ಫಕೀರಪ್ಪ ಹೆಬಸೂರ ಅವರ ಜೀವಮಾನ ಸಾಧನೆಯ ಕುರಿತು ಅಭಿನಂದನಾ ಗ್ರಂಥ ಹೊರಬರುತ್ತಿರುವುದು ಸಂಭ್ರಮ ಇಮ್ಮಡಿಗೊಳಿಸಿದೆ. ಅವರು ಕುರುಬ ಸಮಾಜಕ್ಕೆ ಮಾತ್ರವಲ್ಲ ಗದಗ ಜಿಲ್ಲೆಗೆ ದೊಡ್ಡ ಆಸ್ತಿಯಾಗಿದ್ದಾರೆ’ ಎಂದು ಹೇಳಿದರು.
ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಮಾತನಾಡಿ, ‘ಗದಗ ಜಿಲ್ಲೆಯಲ್ಲಿ ಕುರುಬ ಸಮಾಜವನ್ನು ಸಂಘಟಿಸಿ, ಶಾಶ್ವತ ನೆಲೆ ಕಲ್ಪಿಸಿ, ರಜತ ಮಹೋತ್ಸವ ಆಚರಿಸಲು ಕಾರಣೀಕರ್ತರಾಗಿರುವ ಫಕೀರಪ್ಪ ಹೆಬಸೂರ ಅವರ ಸಾಧನೆ ಅವಿಸ್ಮರಣೀಯವಾಗಿದೆ. ಇದೇ ಸಂದರ್ಭದಲ್ಲಿ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿರುವುದು ಸೂಕ್ತವಾಗಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಉದ್ಯಮಿ ಪ್ರಕಾಶ ಕರಿ, ರಾಜ್ಯ ನಿರ್ದೇಶಕಿ ಚನ್ನಮ್ಮ ಹುಳಕಣ್ಣವರ ಮಾತನಾಡಿದರು.
ರಜತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ರೊಳ್ಳಿ ಮಾತನಾಡಿ, ‘ಈ ಕಾರ್ಯಕ್ರಮದ ಅಂಗವಾಗಿ ಯುವ ಘಟಕದ ನೇತೃತ್ವದಲ್ಲಿ ಕಾಗಿನೆಲೆಯಿಂದ ಗದುಗಿನವರೆಗೆ ಜ್ಯೋತಿಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೆ.20ರಂದು ಗದುಗಿಗೆ ಜ್ಯೋತಿಯಾತ್ರೆ ಬರಲಿದೆ’ ಎಂದರು.
ಕುರುಬರ ಸಂಘದ ರಾಜ್ಯ ನಿರ್ದೇಶಕ ಕಳಕನಗೌಡ ಗೌಡ್ರ, ಹಿರಿಯರಾದ ಸೋಮಕಟ್ಟಿಮಠ, ಸುರೇಶ ಕೊಪ್ಪದ ಇದ್ದರು.
ಎಸ್.ಎಸ್.ಕರಡಿ ಸ್ವಾಗತಿಸಿದರು. ನೀಲಕಂಠ ಮರಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಬಿ.ಕಂಬಳಿ ವಂದಿಸಿದರು.
ಸಮಾಜಕ್ಕೆ ಒಳ್ಳೆಯದು ಮಾಡಿದರೆ; ಸಮಾಜವೂ ನಮಗೆ ಒಳ್ಳೆಯದನ್ನೇ ಮಾಡುತ್ತದೆ ಎನ್ನುವುದಕ್ಕೆ ಎಲ್ಲರೂ ಸಂಘಟನೆಗೊಂಡು ಗೌರವಿಸುತ್ತಿರುವುದೇ ಸಾಕ್ಷಿ. ಒಗ್ಗಟ್ಟಿನಿಂದ ಇದ್ದರೆ ಎಲ್ಲ ಕೆಲಸಗಳನ್ನು ಸರಳವಾಗಿ ಮಾಡಬಹುದು
ಫಕೀರಪ್ಪ ಹೆಬಸೂರ ಕುರುಬ ಸಮಾಜದ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.