ಗದಗ: ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಪೂರ್ವಭಾವಿ ಸಭೆ ಭಾನುವಾರ ಸಂಜೆ 4.30ಕ್ಕೆ ನಗರದ ದೇವರಾಜ ಅರಸು ವಸತಿ ನಿಲಯದಲ್ಲಿ ನಡೆಯಲಿದೆ.
ಸಭೆಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಆರ್.ಪಾಟೀಲ ಉಪಸ್ಥಿತರಿರುವರು.
ಸೆಪ್ಟೆಂಬರ್ 20ರಂದು ನಡೆಯುವ ಗದಗ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಫಕೀರಪ್ಪ ಹೆಬಸೂರರವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ರೂಪುರೇಷೆ, ಸ್ಥಳ ನಿಗಧಿ ಕುರಿತು ಚರ್ಚಿಸಲಾಗುವುದು. ಸಮಾರಂಭಕ್ಕೆ ಗಣ್ಯರ ಆಮಂತ್ರಣ, ಸಮಾರಂಭದ ಸವಿನೆನಪಿಗಾಗಿ ಹೊರತರಲಿರುವ ಸ್ಮರಣ ಸಂಚಿಕೆಯ ಮುದ್ರಣ, ಜಾಹೀರಾತು, ಊಟದ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ತಗಲುವ ಹಣಕಾಸು ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸ್ವಾಗತ ಸಮಿತಿಯ ಕಾರ್ಯದರ್ಶಿ ಶಶಿಧರ ರೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.