
ಮುಂಡರಗಿ: ‘ಸಮಾಜದ ಒಳಿತಿಗೆ ಅಪಾರ ಆಸ್ತಿ ದಾನ ಮಾಡಿದ ಮಹಾದಾನಿ ಸಿರಸಂಗಿ ಲಿಂಗರಾಜ ಅವರು ಸಂತರಿಗೆ ಸಮನಾಗಿ ಬದುಕಿದರು. ಅವರ ದಾನಗುಣ, ಪರೋಪಕಾರ ಪ್ರವೃತ್ತಿ ಹಾಗೂ ತತ್ವಾದರ್ಶಗಳು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಹೈತಾಪುರ ಗ್ರಾಮದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಿರಸಂಗಿ ಲಿಂಗರಾಜರ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿದರು. ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ಅಧ್ಯಕ್ಷ ಈರಪ್ಪ ಬಿಸ್ನಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು.
ಎಂ.ಜಿ. ಗಚ್ಚಣ್ಣವರ ಪ್ರಾಸ್ತಾವಿಕ ಮಾತನಾಡಿದರು. ವಿ.ಎಸ್. ಪಾಟೀಲ ಸ್ವಾಗತಿಸಿದರು. ಎಂ.ಎಸ್. ಪಾಟೀಲ ನಿರೂಪಿಸಿದರು. ಎ. ಮಂಜುನಾಥ ವಂದಿಸಿದರು. ಮಲ್ಲಪ್ಪ ಪೂಜಾರ, ಹನುಮವ್ವ ಬೂದಿಹಾಳ, ಮಲ್ಲಮ್ಮ ಪಾಟೀಲ, ಶಂಕರಗೌಡ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.