
ಮುಂಡರಗಿ: ‘ಕೋಮು ಸೌಹಾರ್ಧತೆಯ ಹರಿಕಾರರಾಗಿದ್ದ ಗದುಗಿನ ಲಿಂ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರು ಬಸವಾದಿ ಶರಣರಂತೆ ಮೌಡ್ಯ, ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿದರು. ಸಮಾನತೆಯಿಂದ ಮಾತ್ರ ಸಮಾಜ ಪರಿವರ್ತನೆ ಹೊಂದಲು ಸಾಧ್ಯ’ ಎಂದು ಸಾರಿದ ಕೀರ್ತಿ ಸಿದ್ಧಲಿಂಗ ಸ್ವಾಮೀಜಿ ಅವರಿಗೆ ಸಲ್ಲುತ್ತದೆ’ ಎಂದು ಹಿರಿಯ ಶಿಕ್ಷಕ ನಿಂಗು ಸೊಲಗಿ ತಿಳಿಸಿದರು.
ತಾಲ್ಲೂಕಿನ ಡಂಬಳ ಗ್ರಾಮದ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಲಿಂ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಜಯಂತಿ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವಕ್ಯತೆ ದಿನಾಚರಣೆಯಲ್ಲಿ ಮಾತನಾಡಿದರು.
‘ಲಿಂ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರು ಮೂಢ ನಂಬಿಕೆ, ಮೌಡ್ಯ ಹಾಗೂ ಕಂದಾಚಾರಗಳನ್ನು ಬದಿಗೊತ್ತಿ, ವೈಚಾರಿಕ ಚಿಂತನೆಗಳನ್ನು ಜನರಲ್ಲಿ ಬಿತ್ತಿದರು. ಜಾತ್ರೆಗಳು ಜನರ ಮನಸ್ಸು ಕಟ್ಟುವ ಕೆಲಸ ಮಾಡಬೇಕೆಂದು ರೊಟ್ಟಿ ಜಾತ್ರೆಗೆ ಚಾಲನೆ ನೀಡಿದರು. ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆ ತಂದರು’ ಎಂದು ತಿಳಿಸಿದರು.
ಡಂಬಳ ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ, ಪ್ರಾಚಾರ್ಯ ಎಸ್.ಎಂ. ಶಿವರಾಚಯ್ಯ ಮಾತನಾಡಿದರು. ಶಿಕ್ಷಕ ರಮೇಶ ಕೊರ್ಲಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ತರಬೇತಿ ಅಧಿಕಾರಿ ಸುರೇಶ ಕುಂಬಾರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.