ADVERTISEMENT

ಗದಗ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್‌: ಎಸ್‌ಪಿ ಯತೀಶ್‌

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 16:09 IST
Last Updated 27 ಸೆಪ್ಟೆಂಬರ್ 2020, 16:09 IST
ಯತೀಶ್‌ ಎನ್‌. 
ಯತೀಶ್‌ ಎನ್‌.    

ಗದಗ: ‘ಕರ್ನಾಟಕ ರಾಜ್ಯ ರೈತ ಸಂಘವು ಇತರೆ ಸಂಘಟನೆಗಳ ಜತೆಗೂಡಿ ಸೋಮವಾರ ಕರ್ನಾಟಕ ಬಂದ್‌ಗೆ ಕರೆಕೊಟ್ಟಿದ್ದು, ಬಂದ್‌ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ವತಿಯಿಂದ ಸಾಕಷ್ಟು ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಹೇಳಿದರು.

‘ಬಂದ್‌ಗೆ ಕರೆಕೊಟ್ಟಿರುವ ಸಂಘಟನೆಗಳ ನಾಯಕರ ಜತೆಗೆ ಸಭೆ ನಡೆಸಲಾಗಿದ್ದು, ಬಂದ್‌ ಸಮಯದಲ್ಲಿ ಯಾವ ರೀತಿ ವರ್ತಿಸಬೇಕು ಎಂಬುದರ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿದೆ. ಶಾಂತಿಯುತವಾಗಿ ಬಂದ್‌ ಆಚರಿಸುವಂತೆ ಸೂಚಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರತಿಭಟನೆ ವೇಳೆ ಪ್ರತಿಭಟನಕಾರರು ಯಾವುದೇ ಕಾರಣಕ್ಕೂ ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ. ಆ ರೀತಿ ಮಾಡಿದ್ದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.