ADVERTISEMENT

ಕ್ರೀಡಾಸ್ಫೂರ್ತಿ ಹೆಚ್ಚಿಸಲು ಗುಡ್ಡಗಾಡು ಓಟ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 4:52 IST
Last Updated 31 ಆಗಸ್ಟ್ 2021, 4:52 IST
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಗದುಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿ ವತಿಯಿಂದ ಗುಡ್ಡಗಾಟು ಓಟ ಸ್ಪರ್ಧೆ ನಡೆಯಿತು
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಗದುಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿ ವತಿಯಿಂದ ಗುಡ್ಡಗಾಟು ಓಟ ಸ್ಪರ್ಧೆ ನಡೆಯಿತು   

ಗದಗ: ಕ್ರೀಡಾಪಟುಗಳ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಗದಗ ಜಿಲ್ಲೆಯ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಗುಡ್ಡುಗಾಡು ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಓಟದ ಸ್ಪರ್ಧೆಯಲ್ಲಿ 14 ವಿದ್ಯಾರ್ಥಿಗಳು, 13 ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಗುಡ್ಡುಗಾಡು ಓಟದ ಸ್ಪರ್ಧೆ ವಿಜೇತಬಸವರಾಜ ಇಂಗಳಗಿ ಸ್ಪರ್ಧೆಗೆ ಚಾಲನೆ ನೀಡಿದರು.

ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರಶಾಂತ ಜೆ.ಸಿ. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ ಚಂದ್‌ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡಿದ ಮಾತನಾಡಿ, ರಾಷ್ಟ್ರೀಯ ಕ್ರೀಡಾ ದಿನಾಚರಣೆಯಂದು ಕ್ರೀಡಾ ಸ್ಫೂರ್ತಿ ಹೆಚ್ಚಿಸಲು ಸ್ಪರ್ಧೆಗಳನ್ನು ಆಯೋಜಿಸಿರುವುದು ಸಂತಸದ ವಿಷಯ ಎಂದು ಹೇಳಿದರು.

ADVERTISEMENT

ಮಂಜುನಾಥ ಚನ್ನಪ್ಪಗೌಡರ ಸ್ವಾಗತಿಸಿದರು. ಗುಡ್ಡುಗಾಡು ಓಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆನಂದಗೌಡ್ರ ಬಹುಮಾನ ವಿತರಿಸಿದರು. ಡಾ. ವೀರೇಶಕುಮಾರ ಬಿ. ವಿಜಾಪುರ ವಂದಿಸಿದರು. ಪ್ರಕಾಶ್ ಮಾಚೇನಹಳ್ಳಿ ನಿರೂಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.