ಲಕ್ಷ್ಮೇಶ್ವರ: ಪಟ್ಟಣದ ಪಿಎಸ್‍ಬಿಡಿ ಬಾಲಕಿಯರ ಪ್ರೌಢ ಶಾಲೆಯ ಬಾಲಕಿಯರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 103 ವಿದ್ಯಾರ್ಥಿನಿಯರ ಪೈಕಿ 96 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ.
ದಾನೇಶ್ವರ ಗವಿ ಶೇ 95 ಅಂಕ ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ. ಅದರಂತೆ ಮಧು ಮೂಲಿಮನಿ ಶೇ 94, ರೋಹಿಣಿ ಬೆಟಗೇರಿ ಶೇ 94, ರೇಷ್ಮಾ ಬಾಕಳೆ ಶೇ 93, ಸೌಮ್ಯಾ ಗೊರವರ ಶೇ 91, ದಿವ್ಯಾ ಹಡಪದ ಶೇ 91 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.