ADVERTISEMENT

ಗ್ಯಾರಂಟಿ ಯೋಜನೆಗಳ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 16:01 IST
Last Updated 4 ಮಾರ್ಚ್ 2024, 16:01 IST
ವಾರ್ತಾ ಇಲಾಖೆಯಿಂದ ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಉದ್ಘಾಟಿಸಿದರು
ವಾರ್ತಾ ಇಲಾಖೆಯಿಂದ ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಉದ್ಘಾಟಿಸಿದರು   

ಗದಗ: ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ವತಿಯಿಂದ ಏಪರ್ಡಿಸಿರುವ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಸೋಮವಾರ ಉದ್ಘಾಟಿಸಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ, ಶಕ್ತಿ, ಯುವ ನಿಧಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಮಾಹಿತಿಯನ್ನು ಇಲ್ಲಿ ಪ್ರದರ್ಶಿಸಿಸಲಾಗಿದೆ.

ಮಾರ್ಚ್‌ 6ರವರೆಗೆ ವಸ್ತುಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇದೆ. 

ADVERTISEMENT

ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್‌., ಅಶೋಕ ಮಂದಾಲಿ, ಬಸ್ ನಿಲ್ದಾಣದ ಸಾರಿಗೆ ನಿಯಂತ್ರಕ ವಿ.ಎಫ್.ಜಾಧವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.