ADVERTISEMENT

ವಿದ್ಯಾರ್ಥಿಗಳಿಂದ ಹೆದ್ದಾರಿ ತಡೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 5:22 IST
Last Updated 1 ಡಿಸೆಂಬರ್ 2022, 5:22 IST
ನರಗುಂದ ತಾಲ್ಲೂಕಿನ ಸಿದ್ದಾಪೂರ ಗ್ರಾಮಕ್ಕೆ ನರಗುಂದದಿಂದ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು
ನರಗುಂದ ತಾಲ್ಲೂಕಿನ ಸಿದ್ದಾಪೂರ ಗ್ರಾಮಕ್ಕೆ ನರಗುಂದದಿಂದ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು   

ನರಗುಂದ: ತಾಲ್ಲೂಕಿನ ಸಿದ್ದಾಪೂರ ಗ್ರಾಮಕ್ಕೆ ನರಗುಂದದಿಂದ ಸರಿಯಾದ ಬಸ್‌ಗಳ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ದಿಢೀರ್‌ ಬಸ್ ತಡೆದು ಪ್ರತಿಭಟಿಸಿದರು.

ಬಸ್ ನಿಲ್ದಾಣದ ಸಮೀಪ ಇರುವ ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಕೆಎಸ್ಆರ್‌ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ‘ನಿತ್ಯ ಹೆಚ್ಚಿನ ಬಸ್ ಓಡಿಸುತ್ತಿದ್ದರು. ಆದರೆ, ಬುಧವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಬಸ್ ಹೋಗುತ್ತಿಲ್ಲ. ಹೀಗಾದರೆ ನಾವು ಮನೆ ತಲುಪುವುದು ಯಾವಾಗ ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಸಾರಿಗೆ ನಿಯಂತ್ರಣ ಅಧಿಕಾರಿ ಆರ್.ಐ. ಪತ್ತಾರ ಹಾಗೂ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಮುಂದಾದರು.

ಆರ್.ಐ. ಪತ್ತಾರ ಮಾತನಾಡಿ, ‘ನಿಮ್ಮ ಗ್ರಾಮಕ್ಕೆ ಸಂಚರಿಸುವ ಬಸ್‌ ಪಂಚರ್‌ ಆಗಿದ್ದರಿಂದ ತೊಂದರೆ ಆಗಿದೆ. ತಕ್ಷಣ 2 ಬಸ್‌ಗಳನ್ನು ಬಿಡುತ್ತೇವೆ. ಮುಂದೆ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು’ ಎಂದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.

ಸಿದ್ದಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.