ADVERTISEMENT

ಆರೋಗ್ಯ ಇಲಾಖೆ ಗುತ್ತಿಗೆ: ಹೊರ ಗುತ್ತಿಗೆ ನೌಕರರಿಂದ ಮುಷ್ಕರ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 8:05 IST
Last Updated 3 ಅಕ್ಟೋಬರ್ 2020, 8:05 IST
ಶಿರಹಟ್ಟಿ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು (ಎಡಚಿತ್ರ) ರೋಣ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಗುತ್ತಿಗೆ ನೌಕರರು ಶುಕ್ರವಾರ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದರು

ಶಿರಹಟ್ಟಿ: ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ನೀಡುವುದರ ಜೊತೆಗೆ ಸೇವೆ ಕಾಯಂಗೊಳಿಸಬೇಕು ಎನ್ನುವುದು ಸೇರಿದಂತೆ 14 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ನಾಗನೂರು, ಹಲವಾರು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಬೇಡಿಕೆಗಳನ್ನು ಈಡೇರಿಕೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಕ್ರಮ ವಹಿಸದ ಕಾರಣ ಅನಿವಾರ್ಯವಾಗಿ ಮುಷ್ಕರದ ಹಾದಿ ತುಳಿಯುವಂತೆ ಮಾಡಿದೆ. ಕೊಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಮಂಜುಳಾ, ಸಂಜು, ಮುತ್ತರಾಜ, ವಿರುಪಾಕ್ಷಗೌಡ, ಗಿರೀಶ, ಈರಣ್ಣ, ಫಕ್ಕೀರೇಶ, ಮಹೇಶ, ಶ್ವೇತಾ, ಜಯಶ್ರೀ, ಶಂಕರ, ಅಸ್ಲಂ, ಅಶೋಕ, ರೇಣುಕಾ, ಪ್ರಶಾಂತ, ಶ್ಯಾಮ, ಹಾಗೂ ನೂರಾರು ನೌಕರರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.