
ಶಿರಹಟ್ಟಿ: ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಕಲಿಕಾ ವಾತಾವರಣ ಮೂಡಿಸುವುದು ಅಗತ್ಯ. ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಲಾಗಿಸುತ್ತಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸೆರೆಂಟಿಕಾ ಕಂಪನಿಯ ವತಿಯಿಂದ ಡೆಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ವೇಳೆ ಸೆರೆಂಟಿಕಾ ಕಂಪನಿ ಸಿಇಒ ಬಾಲಕೃಷ್ಣನ್, ವಿಜೇಶ ಮಾನಕರ, ಇರ್ಷಾದ್ ಅಲಿ, ತಹಶೀಲ್ದಾರ್ ಕೆ. ರಾಘವೇಂದ್ರರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಿಕಿ ನಾಯ್ಕ, ಸುನೀಲ ಮಹಾಂತಶೆಟ್ಟರ, ಬಿ.ಡಿ. ಪಲ್ಲೇದ, ಶಂಕರ ಮರಾಠೆ, ಮಹೇಶ್ ಬಡ್ನಿ, ತಿಮ್ಮರೆಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಬಸುರಡ್ಡಿ ಅಳವುಂಡಿ, ಜಾನು ಲಮಾಣಿ, ಶಿವನಗೌಡ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.