ADVERTISEMENT

ಗದಗ | ವಿದ್ಯಾರ್ಥಿನಿ ಹತ್ಯೆ: ಎಸ್.ಎಫ್‌.ಐ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 5:22 IST
Last Updated 24 ಆಗಸ್ಟ್ 2025, 5:22 IST
ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಖಂಡಿಸಿ ಗಜೇಂದ್ರಗಡದ ತಾಲ್ಲೂಕು ಎಸ್.ಎಫ್‌.ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು
ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಖಂಡಿಸಿ ಗಜೇಂದ್ರಗಡದ ತಾಲ್ಲೂಕು ಎಸ್.ಎಫ್‌.ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು   

ಗಜೇಂದ್ರಗಡ: ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟು ಹಾಕಿದ ಪ್ರಕರಣದ ಸಮಗ್ರ ತನಿಖೆ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಗುರುವಾರ ಎಸ್.ಎಫ್.ಐ ನೇತೃತ್ವದಲ್ಲಿ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯದ ಶಾಲಾ– ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿನ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸುವಂಥ ವ್ಯವಸ್ಥೆಯಿಲ್ಲ. ಅವರಿಗೆ ಲೈಂಗಿಕ ಕಿರುಕುಳ ಆಗುತ್ತಿದ್ದರೆ ಅದನ್ನು ತಡೆಗಟ್ಟುವ ವ್ಯವಸ್ಥೆಯಿಲ್ಲದ ಕಾರಣ ಇಂತಹ ಘಟನೆಗಳು ನಡೆಯುತ್ತಿವೆ. ಸರ್ಕಾರ ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಕಾರ್ಯಕರ್ತರು ಎಚ್ಚರಿಸಿದರು.

‘ನಗರಗಳ ಹೊರ ವಲಯದಲ್ಲಿರುವ ವಸತಿ ನಿಲಯಗಳಿಗೆ ಬೀಟ್‌ ಪೊಲೀಸರನ್ನು ನೇಮಿಸುವುದರ ಜೊತೆಗೆ ನಗರಗಳ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಶಾಲಾ– ಕಾಲೇಜುಗಳು ಹಾಗೂ ಮಹಿಳೆಯರು ಕೆಲಸ ಮಾಡುವಂತಹ ಪ್ರದೇಶಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚನೆ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಎಸ್.ಎಫ್.ಐ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ, ತಾಲ್ಲೂಕು ಅಧ್ಯಕ್ಷ ಅನಿಲ ರಾಠೋಡ, ಅಭಿಲಾಷ ರಾಠೋಡ, ಶರಣು ಎಂ., ಮಹಾಂತೇಶ ಪೂಜಾರ, ಸಾಗರ ಎಚ್., ತನುಜಾ ರಾಯಬಾಗಿ, ವೀಣಾ ಗಾರಗಿ, ಐಶ್ವರ್ಯ ಎಸ್., ಸೋಮು ವಡ್ಡರ, ಮಂಜುಳಾ ಬೆಳವಣಕಿ, ಕೇಶವ ಲಮಾಣಿ, ಅನಿಲ ರಾಠೋಡ, ಅನುಷಾ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.