ಲಕ್ಷ್ಮೇಶ್ವರ: ಶಾಲಾ ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬಿಡಬೇಕು ಎಂದು ಆಗ್ರಹಿಸಿ ಮಂಗಳವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ಬಸ್‍ಗಳು ಕಾಲೇಜು ಸಮಯಕ್ಕೆ ಸಂಚರಿಸುತ್ತಿಲ್ಲ. ಇದರಿಂದಾಗಿ ಸಮಯಕ್ಕೆ ಸರಿಯಾಘಿ ತರಗತಿಗಳಿಗೆ ಹಾಜರಾಗಲು ತೊಂದರೆ ಆಗುತ್ತಿದೆ. ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
‘ಶಾಲಾ ಕಾಲೇಜುಗಳಿಗೆ ಹೋಗುವ ವೇಳೆಗೆ ಬಸ್ ಬಿಡಬೇಕು ಎಂದು ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಿ ಪ್ರತಿಭಟನೆ ಕೂಡ ಮಾಡಲಾಗಿದೆ. ಆದರೂ ಸಾರಿಗೆ ಇಲಾಖೆ ಅಧಿಕಾರಿಗಳು ಮನವಿಗೆ ಸ್ಪಂಧಿಸುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಬಿವಿಪಿ ಸಂಚಾಲಕ ಅಭಿಷೇಕ ಉಮಚಗಿ ಹೇಳಿದರು.
ಈ ವೇಳೆ ವಿನಾಯಕ ಕುಂಬಾರ, ಪ್ರಕಾಶ್ ಪ್ರಕಾಶ ಕುಂಬಾರ, ವಿನಾಯಕ ಸಪ್ಲಡದ, ಅಭಿಷೇಕ ಈಶನಗೌಡ್ರ, ವೀರೇಶ ಕುಂಬಾರ, ಕಾರ್ತಿಕ್ ಹುನಗುಂದ, ಅರವಿಂದ ಇಚ್ಚಂಗಿ, ಹಾಲಪ್ಪ ಜೋಗಿ, ಶರಣಪ್ಪ ಪಾಟೀಲ, ಸತೀಶ ತಳವಾರ, ಆನಂದ ಬಡಿಗೇರ, ಈರಣ್ಣ ಬಡಿಗೇರ, ಹಾಲೇಶ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.