ಗದಗ: ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕಲಾ ವಿಭಾಗದ ಅಂತಿಮ ವರ್ಷದ ಅರ್ಥಶಾಸ್ತ್ರ ವಿಷಯದ ವಿದ್ಯಾರ್ಥಿಗಳಿಂದ ಬೀದಿಬದಿ ವ್ಯಾಪಾರಸ್ಥರ ಆರ್ಥಿಕ ಸ್ಥಿತಿಗತಿ ಕುರಿತು ಕ್ಷೇತ್ರಾಧ್ಯಯನ ನಡೆಯಿತು.
ವಿದ್ಯಾರ್ಥಿಗಳು ಮಾಹಿತಿ ಸಂಗ್ರಹಿಸಲು ಗದಗ ನಗರದ ಭೂಮರಡ್ಡಿ ವೃತ್ತದ ಹತ್ತಿರವಿರುವ ಬೀದಿಬದಿ ವ್ಯಾಪಾರಿಗಳನ್ನು ಭೇಟಿ ಮಾಡಿದರು.
ವಿದ್ಯಾರ್ಥಿಗಳು ತಾವೇ ತಯಾರಿಸಿದ ಪ್ರಶ್ನಾವಳಿಗಳ ಮೂಲಕ ವ್ಯಾಪಾರಸ್ಥರೊಂದಿಗೆ ಚರ್ಚೆ ಮಾಡಿದರು. ಅಗತ್ಯವಿರುವ ಮಾಹಿತಿ ಸಂಗ್ರಹಿಸಿದರು.
ಕ್ಷೇತ್ರಾಧ್ಯಯನ ಕಾರ್ಯದಲ್ಲಿ ಪ್ರೊ. ವನಜಾಕ್ಷಿ ಸೂಡಿ ಹಾಗೂ ಪ್ರೊ. ಶ್ವೇತಾ ಸಿ. ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.