
Lack of student attendance: A note for action
ಮುಂಡರಗಿ: ‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆ ಹಾಗೂ ನಾಡ ಹಬ್ಬ ಆಚರಣೆಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಂತಹ ವಿದ್ಯಾರ್ಥಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಸೂಚಿಸಿದರು.
ಪಟ್ಟಣದ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ನಡೆದ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಅನವಶ್ಯಕವಾಗಿ ತರಗತಿಗೆ ಗೈರಾಗುವ ವಿದ್ಯಾರ್ಥಿಗಳ ಪಾಲಕರಿಗೆ ಮಾಹಿತಿ ನೀಡುವ ಮೂಲಕ ಹಾಜರಾತಿ ಹೆಚ್ಚಿಸಬೇಕು’ ಎಂದರು.
ನಿವೃತ್ತ ಉಪನ್ಯಾಸಕ ಆರ್.ಎಲ್. ಪೊಲೀಸ್‌ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿದರು. ಪ್ರಾಚಾರ್ಯೆ ಉಮಾ ಕೊಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಮೇಲ್ವಿಚಾರಣಾ ಸಮಿತಿ ಸದಸ್ಯ ಎಂ.ವಿ. ಅರಳಿ, ಪ್ರಶಾಂತಗೌಡ ಪಾಟೀಲ, ಮಲ್ಲಿಕಾರ್ಜುನ ಹಣಜಿ, ಎಸ್.ಎಸ್. ಗಡ್ಡದ, ಅರುಣಾ ಪಾಟೀಲ, ರವಿಗೌಡ ಪಾಟೀಲ, ವಿರುಪಾಕ್ಷಗೌಡ ಎಚ್., ರುದ್ರಗೌಡ ಪಾಟೀಲ, ಪ್ರಿಯಾಂಕ ಗಡದರ, ಕಾವೇರಿ ಬೋಲಾ, ಮಿಟ್ಯಾನಾಯಕ, ಪ್ರಕಾಶ ಪೂಜಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.