
ನರಗುಂದ: ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ಖರೀದಿಗೆ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಉಮೇಶ ಮರ್ಚಪ್ಪನವರ ಆಗ್ರಹಿಸಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಬುಧವಾರ ತಹಶೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಿದರು.
‘ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ ಜಿಲ್ಲೆಗಳ ರೈತರು ಸರ್ಕಾರಕ್ಕೆ ಹಲವು ಬಾರಿ ಬೆಲೆ ನಿಗದಿ ಮಾಡಬೇಕೆಂದು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು’ ಆರೋಪಿಸಿದರು.
ಈ ವೇಳೆ ಶೇಖರಗೌಡ ಪೊಲೀಸ್‌ಪಾಟೀಲ, ಬಸಯ್ಯ ಹೊರಗಿನಮಠ, ಹನಮಂತಗೌಡ ಭೂಸನ್ನವರ, ಶಾಲಗೌಡ ಬಾಳಗೌಡರ, ಕುಮಾರಗೌಡ ಕಪ್ಲ, ಮಹಾಂತೇಶ ಚಿನಿವಾಲರ, ಯಂಕಪ್ಪ ಕಲ್ಲಾಪೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.