ಗದಗ: ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವ ನಡೆಯುತ್ತವೆ. ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರು ಎತ್ತಿನ ಗಾಡಿ ಹಾಗೂ ಕುದುರೆ ಗಾಡಿಗಳನ್ನು ತೆಗೆದುಕೊಂಡು ಜಾತ್ರೆಗೆ ಹೋಗುತ್ತಾರೆ.
ಆದರೆ, ಎತ್ತಿನಗಾಡಿ, ಕುದುರೆಗಾಡಿಗೆ ಕಟ್ಟಿರುವ ಎತ್ತು, ಕುದುರೆ ಹಾಗೂ ಬೇರೆ ಪ್ರಾಣಿಗಳನ್ನು ಜೋಡಿ ಮಾಡಿ ಕಟ್ಟಿಕೊಂಡು ಮತ್ತು ಬರುವ ಔಷಧ ನೀಡಿ ಅವುಗಳಿಗೆ ಮನಬಂದಂತೆ ಹೊಡೆಯುತ್ತಾ ರಸ್ತೆಯಲ್ಲಿ ಓಡಿಸುತ್ತಾ, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವುದು ಕಂಡುಬಂದಿದೆ.
ಈ ರೀತಿ ಮಾಡುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ 1960 ಸೆಕ್ಷನ್ 11 (1) ಹಾಗೂ ಭಾರತೀಯ ನ್ಯಾಯ ಸಂಹಿತೆ -2023, 285, 291 ಹಾಗೂ 325ನೇ ಪ್ರಕಾರ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನರಗುಂದ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರಸ್ಕೃತಗೊಂಡ ಬೆಳೆವಿಮೆ ಪ್ರಸ್ತಾವಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಗದಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ಇರುವ ಗದಗ ತಾಲ್ಲೂಕಿನ ಮುಂಗಾರು ಹಂಗಾಮಿನ 27 ಹಾಗೂ ಹಿಂಗಾರು ಹಂಗಾಮಿನ 1,570 ಒಟ್ಟಾರೆ 1,597 ಬೆಳೆವಿಮೆ ಪ್ರಸ್ತಾವನೆಗಳನ್ನು ಅಂತಿಮವಾಗಿ ವಿಮಾ ಸಂಸ್ಥೆಯವರು ತಿರಸ್ಕರಿಸಿರುತ್ತಾರೆ.
ಅಂತಹ ಪ್ರಸ್ತಾವನೆಗಳ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದ್ದು, ರೈತರು ತಮ್ಮ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
2023-24ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಮೂದಾದ ಬೆಳೆಯ ಉತಾರ ಅಥವಾ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಮಾರಾಟ ಮಾಡಿದ್ದರೆ ಅದರ ರಸೀದಿ ಅಥವಾ ಎಪಿಎಂಸಿಯಲ್ಲಿ ಬೆಳೆ ಮಾರಾಟ ಮಾಡಿದ್ದರ ರಸೀದಿ
ಫೆ.28ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಗದಗ ಕಚೇರಿಗೆ ಸಲ್ಲಿಸಬಹುದಾಗಿದೆ.
ಮಾಹಿತಿಗೆ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ಹುಲಕೋಟಿ, ಬೆಟಗೇರಿ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಗದಗ ಇವರನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.