
ಗದಗ: ‘ರೋಣ ತಹಶೀಲ್ದಾರ್ ನಾಗರಾಜ ಕೆ. ಅವರ ಮೇಲೆ ಇಬ್ಬರು ವ್ಯಕ್ತಿಗಳು ಜ.25ರಂದು ಹಲ್ಲೆ ಮಾಡಿದ್ದು, ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕರ್ನಾಟಕ ಸರ್ಕಾರಿ ಕಂದಾಯ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಟಿ.ವಾಲ್ಮೀಕಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
‘ಕಂದಾಯ ಇಲಾಖೆ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಾಣಕ್ಕೆ ಕ್ರಮವಹಿಸಬೇಕು’ ಎಂದು ಆಗ್ರಹಿಸಲಾಯಿತು.
ಜಿಲ್ಲಾ ಕಂದಾಯ ನೌಕರರ ಸಂಘದ ಉಪಾಧ್ಯಕ್ಷ ಬಿ.ಎಸ್.ಕನ್ನೂರ, ಪ್ರಧಾನ ಕಾರ್ಯದರ್ಶಿ ಎಫ್.ಎಸ್.ಗೌಡರ, ಜಿಲ್ಲಾ ಗ್ರಾಮ ಅಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಅರುಣ ಮಂಟೂರ, ಉಪವಿಭಾಗಾಧಿಕಾರಿ ಕಾರ್ಯಾಲಯದ ಸಿಬ್ಬಂದಿ ಜೆ.ಎಂ.ಜೋಶಿ, ಜಿಲ್ಲಾಧಿಕಾರಿ ಕಾರ್ಯಾಲಯದ ಎಲ್ಲ ಶಿರಸ್ತೇದಾರರು, ಸಿಬ್ಬಂದಿವರ್ಗ ಹಾಗೂ ಎಲ್ಲ ತಾಲ್ಲೂಕುಗಳ ಶಿರಸ್ತೇದಾರರು, ಉಪ ತಹಶೀಲ್ದಾರರು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.