ADVERTISEMENT

ಚಲಿಸುವ ರೈಲಿನಿಂದ ಬಿದ್ದು ಶಿಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2025, 16:32 IST
Last Updated 11 ಮೇ 2025, 16:32 IST

ಗದಗ: ಮಂಗಳೂರು–ವಿಜಯಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕ ರಾಮಚಂದ್ರ ಢಗೆ (40) ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

‘ಬಾಗಲಕೋಟೆ ನವನಗರ ನಿವಾಸಿಯಾದ ರಾಮಚಂದ್ರ ಅವರು ಮೈಸೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷರಾಗಿದ್ದರು. ಇವರು ಮಂಗಳೂರು– ವಿಜಯಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಶನಿವಾರ ಸಂಜೆ 6.30ರ ಸುಮಾರಿಗೆ ಹೊಂಬಳ ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾರೆ. ಚಲಿಸುವ ರೈಲಿಗೆ ಕಾಲುಗಳು ಸಿಕ್ಕಿಹಾಕಿಕೊಂಡಿದ್ದರಿಂದ ಕಾಲುಗಳು ತುಂಡಾಗಿವೆ. ತೀವ್ರ ರಕ್ತಸ್ತಾವ ಆಗುತ್ತಿದ್ದ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಗದಗ ರೈಲ್ವೆ ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT