ಶಿರಹಟ್ಟಿ: ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸದಿಂದ ಪ್ರಾಣತೆತ್ತ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಸ್ಥಳೀಯ ಕನಕದಾಸ ವೃತ್ತದಲ್ಲಿ ಸಾರ್ವಜನಿಕರು ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಯುವ ನಾಯಕರಾದ ಸಂತೋಷ ಕುರಿ, ನಾಗರಾಜ ಲಕ್ಕುಂಡಿ ಹಾಗೂ ಮಾಬುಸಾಬ ಲಕ್ಷ್ಮೇಶ್ವರ ಮಾತನಾಡಿ, ‘ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರಗಾಮಿ ಚಟುವಟಿಕೆ ನಡೆಸಿರುವುದು ನಿಜಕ್ಕೂ ಖಂಡನೀಯ. ಪಾಕಿಸ್ತಾನವು ನೇರವಾಗಿ ಯುದ್ಧ ಮಾಡಲು ಧೈರ್ಯವಿಲ್ಲದೆ ಇಂತಹ ಹೇಯ ಕೃತ್ಯಗಳನ್ನು ನಡೆಸುತ್ತಿದೆ. ಕಾಶ್ಮೀರವನ್ನು ಭಯೋತ್ಪಾದನೆಯಿಂದ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹುನ್ನಾರ ನಡೆಸುತ್ತಿರುವ ಪಾಕಿಸ್ತಾನಿಗಳ ಪ್ರಯತ್ನ ಎಂದಿಗೂ ಸಫಲವಾಗುವುದಿಲ್ಲ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆಗಳನ್ನು ನಿರ್ಮೂಲನೆ ಮಾಡುವ ಮೂಲಕ ಪ್ರಾಣ ಕಳೆದುಕೊಂಡ ಪ್ರವಾಸಿಗರ ಆತ್ಮಕ್ಕೆ ಶಾಂತಿ ದೊರಕುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.
ಪರಶುರಾಮ ಡೊಂಕಬಳ್ಳಿ, ಆನಂದ ಘಂಟಿ, ಮಾಂತೇಶ ದಶಮನಿ, ಜಗದೀಶ ಇಟ್ಟೇಕಾರ, ಆನಂದ ಕೋಳಿ, ಅಕ್ಬರ್ ಯಾದಗಿರಿ, ಶಿವಕುಮಾರ, ಮುದಕಪ್ಪ ವರವಿ, ಸಚಿನ ಜಡಿಯವರ, ಫಕೀರೇಶ ಇಂಗಳಗಿ, ಈಶಪ್ಪ ಕಲ್ಲಪ್ಪನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.