ADVERTISEMENT

ಗೊ.ರು.ಚ ಅವರಿಗೆ ‘ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 13:50 IST
Last Updated 9 ಅಕ್ಟೋಬರ್ 2024, 13:50 IST
ಗೊ.ರು.ಚನ್ನಬಸಪ್ಪ
ಗೊ.ರು.ಚನ್ನಬಸಪ್ಪ   

ಗದಗ: ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥ ನೀಡುವ ‘ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಗೆ ಶರಣ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತೋಂಟದಾರ್ಯ ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟರ ತಿಳಿಸಿದ್ದಾರೆ.

‘ಅ.14ರಂದು ನಗರದ ತೋಂಟದಾರ್ಯ ಮಠದಲ್ಲಿ ನಡೆಯುವ ಸಿದ್ಧಲಿಂಗ ಸ್ವಾಮೀಜಿಯವರ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ₹5 ಲಕ್ಷ ನಗದು, ಫಲಕ ಒಳಗೊಂಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT