
ಪ್ರಜಾವಾಣಿ ವಾರ್ತೆ
ನರೇಗಲ್: ಸಮೀಪದ ತೋಟಗಂಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಹಬ್ಬದ ಸುಗ್ಗಿ ಗೀತೆ ನೃತ್ಯ ಮಾಡಿ ಸಂಭ್ರಮಿಸಿದರು.
ಮುಖ್ಯ ಶಿಕ್ಷಕಿ ಎಚ್.ಸಿ. ಶೈಲಾ, ‘ದೇಶದ ಪ್ರತಿ ಹಬ್ಬವೂ ತನ್ನದೆಯಾದ ಧಾರ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆ ಹೊಂದಿವೆ. ವಿದ್ಯಾರ್ಥಿಗಳು ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು’ ಎಂದರು.
ಈ ವೇಳೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.