ಲಕ್ಷ್ಮೇಶ್ವರ: ಸಾಲ ತೀರಿಸಲು ಸಾಧ್ಯವಾಗದೆ ತಾಲ್ಲೂಕಿನ ಗೋವನಾಳ ಗ್ರಾಮದ ಒಂದೇ ಕುಟುಂಬದ ಮೂವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೇಣುಕಾ ತೇಲಿ (50), ಸಹೋದರಿ ಸಾವಕ್ಕ ತೇಲಿ (45) ಮತ್ತು ರೇಣುಕಾ ಅವರ ಪುತ್ರ ಮಂಜುನಾಥ (22) ಮೃತರು.
‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ. ರೇಣುಕಾ ಮತ್ತು ಮಂಜುನಾಥ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಯಲವಿಗಿ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡರು. ಅವರ ಸಾವಿನ ಸುದ್ದಿ ಕೇಳಿ ಮನೆಯಲ್ಲಿ ಸಾವಕ್ಕ ನೇಣು ಹಾಕಿಕೊಂಡರು’ ಎಂದು ಪೊಲೀಸರು ತಿಳಿಸಿದ್ದಾರೆ.
ಹಾವೇರಿ ರೈಲ್ವೆ ಪೊಲೀಸ್ ಠಾಣೆ ಮತ್ತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.