ADVERTISEMENT

ಶಿರಹಟ್ಟಿ: ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 16:22 IST
Last Updated 15 ಏಪ್ರಿಲ್ 2022, 16:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶಿರಹಟ್ಟಿ: ಸಮೀಪದ ಹಂಗನಕಟ್ಟಿಯಿಂದ ಮದುವೆ ಮುಗಿಸಿ ಧಾರವಾಡ ಜಿಲ್ಲೆಯ ಅಣ್ಣಿಗೇರಿಗೆ ಹೊರಟಿದ್ದ ಟ್ರ್ಯಾಕ್ಟರ್‌ನ ಹುಕ್ ಮುರಿದು ಟ್ರೇಲರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ವಿನಾಯಕ ಸಬನೇಶಿ(18), ಪ್ರದೀಪ ನಾಗಪ್ಪ ಕರಿಬಸಣ್ಣವರ(13) ಮೃತರು.

ಟ್ರಾಕ್ಟರ್‌ನಲ್ಲಿದ್ದ 30‌ ಜನರರಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಗಂಭೀರವಾಗಿ ಗಾಯಗೊಂಡ 7 ಜನರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.