ADVERTISEMENT

ಭೀಷ್ಮಕೆರೆ: ಉದ್ಯಾನ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಮೇ 2019, 12:35 IST
Last Updated 14 ಮೇ 2019, 12:35 IST
ಗದುಗಿನ ಭೀಷ್ಮಕೆರೆ ಆವರಣದಲ್ಲಿ ಕೈಗೊಂಡಿರುವ ಉದ್ಯಾನ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವೀಕ್ಷಿಸಿ, ಪರಿಶೀಲನೆ ನಡೆಸಿದರು. ನಗರಸಭೆ ಪೌರಾಯುಕ್ತ ದೀಪಕ ಹರಡಿ, ಎಇಇ ಎಲ್.ಜಿ. ಪತ್ತಾರ ಇದ್ದರು
ಗದುಗಿನ ಭೀಷ್ಮಕೆರೆ ಆವರಣದಲ್ಲಿ ಕೈಗೊಂಡಿರುವ ಉದ್ಯಾನ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವೀಕ್ಷಿಸಿ, ಪರಿಶೀಲನೆ ನಡೆಸಿದರು. ನಗರಸಭೆ ಪೌರಾಯುಕ್ತ ದೀಪಕ ಹರಡಿ, ಎಇಇ ಎಲ್.ಜಿ. ಪತ್ತಾರ ಇದ್ದರು   

ಗದಗ: ಅಮೃತ ಯೋಜನೆಯಡಿ ಕೇಂದ್ರ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಕೈಗೊಂಡಿರುವ ಭೀಷ್ಮಕೆರೆ ಆವರಣದ ಉದ್ಯಾನ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವೀಕ್ಷಿಸಿ, ಪರಿಶೀಲನೆ ನಡೆಸಿದರು.

ನಗರಸಭೆ ಪೌರಾಯುಕ್ತ ದೀಪಕ್ ಹರಡಿ ಅವರು, ‘ಅಮೃತ ಯೋಜನೆಯಡಿ ₹9.56 ಕೋಟಿ ವೆಚ್ಚದಲ್ಲಿ ಇಲ್ಲಿನ ಉದ್ಯಾನ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ನಗರಸಭೆ ಎಇಇ ಎಲ್.ಜಿ. ಪತ್ತಾರ, ಎಂಜಿನಿಯರ್‌ ಎಚ್.ಎ. ಬಂಡಿವಡ್ಡರ ಇದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ನಗರಸಭೆ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.