ಗದಗ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶುಕ್ರವಾರ ಉದ್ಘಾಟನೆಗೊಳ್ಳಲಿರುವ ಸಂಕನೂರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಗುರುವಾರ ಭೇಟಿ ನೀಡಿ, ಶುಭ ಹಾರೈಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿರುವ ಕಾರಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಸಂಪೂರ್ಣ ಕಟ್ಟಡವನ್ನು ವೀಕ್ಷಿಸಿದ ಅವರು, ಇದೊಂದು ಮಾದರಿ ನರ್ಸಿಂಗ್ ಕಾಲೇಜು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಉಪಾಧ್ಯಕ್ಷ ಡಾ.ಪ್ರಕಾಶ ಸಂಕನೂರ ಮತ್ತು ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ವೇತಾ ಸಂಕನೂರ, ನಿವೃತ್ತ ಪ್ರಾಧ್ಯಾಪಕ ಸುಭಾಸ ಸಂಕನೂರ ಅವರನ್ನು ಅಭಿನಂದಿಸಿದರು.
ಶಾಸಕರಾದ ಸಿ.ಸಿ.ಪಾಟೀಲ, ಡಾ. ಚಂದ್ರು ಲಮಾಣಿ, ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.