ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಗದಗ ಜಿಲ್ಲೆಗೆ ಜುಲೈ 2025 ಅಂತ್ಯಕ್ಕೆ 17,778 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು, ಇಲ್ಲೀವರೆಗೆ 21,647 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಜಿಲ್ಲೆಗೆ ಪೂರೈಸಲಾಗಿದೆ.
ಪ್ರಸ್ತುತ 1,321 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವು ಜಿಲ್ಲೆಯ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ದಾಸ್ತಾನು ಇರುತ್ತದೆ.
ಆಗಸ್ಟ್ 1ರಂದು ಕೋರಮಂಡಲ್ ಸಂಸ್ಥೆಯಿಂದ 200 ಮೆಟ್ರಿಕ್ ಟನ್ ಹಾಗೂ ಆಗಸ್ಟ್ 2ರಂದು ಸ್ಪಿಕ್ ಸಂಸ್ಥೆಯ 300 ಮೆಟ್ರಿಕ್ ಟನ್ ಸೇರಿದಂತೆ ಒಟ್ಟು 500 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಲಿದೆ.
ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಎಫ್‌ಪಿಒಗಳಿಗೆ ರಸಗೊಬ್ಬರಗಳನ್ನು ಪಾಯಿಂಟ್ ಆಫ್ ಸೇಲ್ ಮೂಲಕವೇ ಮಾರಾಟ ಮಾಡುವಂತೆ ಸೂಚಿಸಲಾಗಿದೆ. ರೈತರಿಗೆ ರಶೀತಿ ನೀಡುವುದು, ನಿಗದಿತ ದರಗಳಲ್ಲಿ ಮಾರಾಟ ಮಾಡುವುದು ಕಡ್ಡಾಯವಾಗಿದೆ. ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು, ಪಾಯಿಂಟ್ ಆಫ್ ಸೇಲ್‌ನಲ್ಲಿ ಬಾಕಿ ಇರುವುದು ಮತ್ತು ರೈತರಿಗೆ ಬಿಲ್ ನೀಡದಿರುವ ಬಗ್ಗೆ ರೈತರಿಂದ ದೂರುಗಳು ಬಂದಲ್ಲಿ ಅಂತಹ ರಸಗೊಬ್ಬರ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕಿ ಜಿ.ಎಚ್.ತಾರಾಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.