ADVERTISEMENT

ಲಕ್ಷ್ಮೇಶ್ವರ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 5:17 IST
Last Updated 13 ಜನವರಿ 2026, 5:17 IST
ಲಕ್ಷ್ಮೇಶ್ವರದ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು 
ಲಕ್ಷ್ಮೇಶ್ವರದ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು    

ಲಕ್ಷ್ಮೇಶ್ವರ: ಪಟ್ಟಣದ ಎಸ್‍ಎಂಜೆವಿಜಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಕಾನೂನು ಸೇವೆಗಳ ತಾಲ್ಲೂಕು ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು.

ನ್ಯಾಯಾಧೀಶ ಭರತ ಯೋಗೇಶ ಕರಗುದರಿ, ‘ವಿವೇಕಾನಂದ ಅವರು ಭವ್ಯ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ದೇಶಕ್ಕೆ ಸಾರಿದವರು’ ಎಂದರು.

ನ್ಯಾಯಾಧೀಶ ಸತೀಶ ಎಂ. ಮಾತನಾಡಿದರು. ಪ್ರಾಚಾರ್ಯ ಎಸ್.ಎನ್. ಹುಲ್ಲನ್ನವರು ಅಧ್ಯಕ್ಷತೆ ವಹಿಸಿದ್ದರು. ಆರ್.ಎಂ. ಕುರಿ, ಬಾಲ ನ್ಯಾಯ ಮಂಡಳಿ ಸದಸ್ಯ ಪಿ.ಎಂ. ವಾಲಿ ಇದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.