ಮುಂಡರಗಿ: ‘ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.
ಪಟ್ಟಣದ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಹಾಗೂ ಶಾಲಾ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಪ್ರಜಾಪ್ರಭುತ್ವ ಮೂಲಕ ದೇಶದಲ್ಲಿ ಪ್ರತಿಯೊಬ್ಬರೂ ಸ್ವಾತಂತ್ರ್ಯವಾಗಿ ಬಾಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದರು.
ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಸೋಮಣ್ಣ ಹೈತಾಪುರ, ವಿದ್ಯಾರ್ಥಿಗಳಾದ ಪೂಜಾ ಕುಂಬಾರ, ತೇಜಶ್ವಿನಿ ಕಲಾಲ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಅರುಣಾ ಸೋರಗಾವಿ ಸ್ವಾಗತಿಸಿದರು. ಶ್ರೀಕಾಂತ ಅರಹುಣಸಿ ನಿರೂಪಿಸಿದರು. ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಗ್ರೇಡ್-2 ತಹಶೀಲ್ದಾರ್ ಕೆ. ರಾಧಾ, ಸಿಪಿಐ ಮಂಜುನಾಥ ಕುಸುಗಲ್, ಪ್ರಾಣೇಶ. ಎಚ್., ಎಂ.ಎಂ. ತಾಂಬೋಟಿ, ಸುವರ್ಣಾ ಕೋಟಿ, ಮಹಾದೇವ ಇಸರನಾಳ, ಶಂಕರಗೌಡ ಜಾಯನಗೌಡ್ರ, ಹನುಮಂತ ಚನ್ನದಾಸರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.