ADVERTISEMENT

ಲಕ್ಷ್ಮೇಶ್ವರ| ಅಸಮರ್ಪಕ ನೀರು ಪೂರೈಕೆ: ಶಾಸಕ ಚಂದ್ರು ಲಮಾಣಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 5:02 IST
Last Updated 9 ನವೆಂಬರ್ 2025, 5:02 IST
ಲಕ್ಷ್ಮೇಶ್ವರದ ಮೇಲ್ಮಟ್ಟದ ಜಲಾಗಾರಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಶನಿವಾರ ಭೇಟಿ ನೀಡಿ ಕುಡಿಯುವ ನೀರು ಪೂರೈಕೆಯ ಸಮಸ್ಯೆ ಕುರಿತು ಪರಿಶೀಲನೆ ನಡೆಸಿದರು
ಲಕ್ಷ್ಮೇಶ್ವರದ ಮೇಲ್ಮಟ್ಟದ ಜಲಾಗಾರಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಶನಿವಾರ ಭೇಟಿ ನೀಡಿ ಕುಡಿಯುವ ನೀರು ಪೂರೈಕೆಯ ಸಮಸ್ಯೆ ಕುರಿತು ಪರಿಶೀಲನೆ ನಡೆಸಿದರು   

ಲಕ್ಷ್ಮೇಶ್ವರ: ಶಾಸಕ ಡಾ.ಚಂದ್ರು ಲಮಾಣಿ ಅವರು ಪಟ್ಟಣದ ಮೇಲ್ಮಟ್ಟದ ಜಲಾಗಾರ, ಹಾಗೂ ಪೈಪ್‍ಲೈನ್ ಅಳವಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


‘ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಕುರಿತು ಜನರಿಂದ ದೂರುಗಳು ಬರುತ್ತಿವೆ. ನೀರು ಪೂರೈಕೆಯಾಗದ ಕಾರಣ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು. ನೀರು ಪೂರೈಸುವ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದರು.

ಈ ವೇಳೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಮಂಜುನಾಥ ಮುದಗಲ್ಲ, ಬಸವಣ್ಣೆಪ್ಪ ನಂದೆಣ್ಣವರ, ನಿಂಗಪ್ಪ ಬನ್ನಿ, ಹನಮಂತಪ್ಪ ನಂದೆಣ್ಣವರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.