ADVERTISEMENT

ಹೆಲ್ಮೆಟ್‌ ಧರಿಸದ ವಾಹನ ಸವಾರರಿಂದ ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 2:50 IST
Last Updated 27 ಸೆಪ್ಟೆಂಬರ್ 2020, 2:50 IST
ಶಿರಹಟ್ಟಿ ಪಟ್ಟಣದ ನೆಹರೂ ವೃತದಲ್ಲಿ ಮಾಸ್ಕ್‌, ಹೆಲ್ಮೆಟ್‌ ಧರಿಸದ ವಾಹನ ಸವಾರರಿಂದ ಪೊಲೀಸರು ದಂಡ ವಸೂಲಿ ಮಾಡಿದರು
ಶಿರಹಟ್ಟಿ ಪಟ್ಟಣದ ನೆಹರೂ ವೃತದಲ್ಲಿ ಮಾಸ್ಕ್‌, ಹೆಲ್ಮೆಟ್‌ ಧರಿಸದ ವಾಹನ ಸವಾರರಿಂದ ಪೊಲೀಸರು ದಂಡ ವಸೂಲಿ ಮಾಡಿದರು   

ಶಿರಹಟ್ಟಿ: ದ್ವಿಚಕ್ರ ವಾಹನ ಸವಾರರಿಗೆ ಕಡ್ಡಾಯವಾಗಿ ಮಾಸ್ಕ್‌, ಹೆಲ್ಮೆಟ್‌ ಧರಿಸಬೇಕು ಎಂದು ಈಗಾಗಲೇ ಪಟ್ಟಣ ಪಂಚಾಯ್ತಿಯ ಮೂಲಕ ಡಂಗುರ ಹೊಡಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗುತ್ತಿದೆ ಎಂದು ಪಿಎಸ್‌ಐ ಸುನೀಲಕುಮಾರ ನಾಯಕ್‌ ಹೇಳಿದರು.

ಪಟ್ಟಣದ ನೆಹರೂ ವೃತ್ತದಲ್ಲಿ ಮಾಸ್ಕ್‌ ಮತ್ತು ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸುತ್ತಿದ್ದವರಿಗೆ ಪೋಲಿಸರು ದಂಡ ವಿಧಿಸಿದರು. ಹೆಲ್ಮೆಟ್, ಮಾಸ್ಕ್ ಧರಿಸುವಂತೆ ಎಚ್ಚರಿಕೆಯನ್ನೂ ನೀಡಿದರು.

ಇತ್ತಿಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿದ್ದು, ಅದರಲ್ಲಿ ಹೆಲ್ಮೆಟ್‌ ಧರಿಸದೆ ಸಾವನಪ್ಪಿರುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸುರಕ್ಷತೆಯ ಮತ್ತು ಆರೋಗ್ಯದ ದೃಷ್ಟಿಯಿಂದ ಮಾಸ್ಕ್‌ ಮತ್ತು ಹೆಲ್ಮೆಟ್‌ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದರು.

ADVERTISEMENT

ಹೆಲ್ಮೆಟ್‌ ಧರಿಸದ ವಾಹನ ಸವಾರರಿಂದ ₹500 ಹಾಗೂ ಮಾಸ್ಕ್‌ ಧರಿಸದವರಿಂದ ₹ 100 ದಂಡ ವಸೂಲಿ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ವಾಹನ ಚಲಾಯಿಸಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.