ADVERTISEMENT

ಸಾರಿಗೆ ಸಂಸ್ಥೆಗೆ ₹1 ಕೋಟಿ ನಷ್ಟ

ವಾರಾಂತ್ಯ ಕರ್ಫ್ಯೂ: ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 5:10 IST
Last Updated 17 ಜನವರಿ 2022, 5:10 IST
ವಾರಾಂತ್ಯದ ಕರ್ಫ್ಯೂ ಕಾರಣದಿಂದಾಗಿ ಭಾನುವಾರ ಗದಗ ನಗರದಲ್ಲಿ ಜನಸಂಚಾರ ವಿರಳವಾಗಿತ್ತು
ವಾರಾಂತ್ಯದ ಕರ್ಫ್ಯೂ ಕಾರಣದಿಂದಾಗಿ ಭಾನುವಾರ ಗದಗ ನಗರದಲ್ಲಿ ಜನಸಂಚಾರ ವಿರಳವಾಗಿತ್ತು   

ಗದಗ: ವಾರಾಂತ್ಯ ಕರ್ಫ್ಯೂಗೆ ಭಾನುವಾರವೂ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಗತ್ಯ ಸೇವೆ
ಗಳನ್ನು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಬಂದ್‌ ಆಗಿದ್ದವು.

ಕಿರಾಣಿ ಅಂಗಡಿ, ಔಷಧ ಅಂಗಡಿ, ಹೋಟೆಲ್‌, ಹಾಲು ಮಾರಾಟ ಕೇಂದ್ರ, ಹೂವು ಹಣ್ಣು, ತರಕಾರಿ ಮಾರುಕಟ್ಟೆಗಳು ಎಂದಿನಂತೆ ಕಾರ್ಯಾಚರಿಸಿದವು. ಮೀನು, ಮಾಂಸ ಮಾರುಕಟ್ಟೆಯಲ್ಲಿ ಜನಸಂದಣಿ ಜಾಸ್ತಿ ಇತ್ತು.

‘ಪ್ರಯಾಣಿಕರ ಸಂಖ್ಯೆಯನ್ನು ಆಧರಿಸಿ ವಿವಿಧ ರೂಟ್‌ಗಳಿಗೆ ಬಸ್‌ಗಳನ್ನು ಓಡಿಸಲಾಗಿದೆ. ಶನಿವಾರ 54ಬಸ್‌ಗಳು ಸಂಚರಿಸಿದ್ದವು. ಭಾನುವಾರದಂದು 75 ಬಸ್‌ಗಳನ್ನು ಓಡಿಸಲಾಗಿದೆ. ಹಾಲ್ಟಿಂಗ್‌ ಬಸ್‌ಗಳು ಆಯಾ ಸ್ಥಳಗಳಿಗೆ ಸಂಚರಿಸಿವೆ. ಎರಡು ದಿನಗಳಿಂದ ಸಾರಿಗೆ ಸಂಸ್ಥೆಗೆ ₹1 ಕೋಟಿ ನಷ್ಟ ಸಂಭವಿಸಿದೆ’ ಎಂದು ಗದಗ ವಿಭಾಗದ ಸಂಚಾರ ನಿಯಂತ್ರಣ ಅಧಿಕಾರಿ ಜಿ.ಐ.ಬಸವಂತಪುರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.