ADVERTISEMENT

ಲಕ್ಷ್ಮೇಶ್ವರ | ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 15:42 IST
Last Updated 29 ಸೆಪ್ಟೆಂಬರ್ 2024, 15:42 IST
ಲಕ್ಷ್ಮೇಶ್ವರದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಸಚಿವ ಎಚ್.ಕೆ. ಪಾಟೀಲ ಭಾನುವಾರ ವೀಕ್ಷಿಸಿದರು
ಲಕ್ಷ್ಮೇಶ್ವರದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಸಚಿವ ಎಚ್.ಕೆ. ಪಾಟೀಲ ಭಾನುವಾರ ವೀಕ್ಷಿಸಿದರು   

ಲಕ್ಷ್ಮೇಶ್ವರ: ‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಲಕ್ಷ್ಮೇಶ್ವರದಲ್ಲಿ ನಡೆಯುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಅವರು ಮಾತನಾಡಿದರು.

ಮುಖ್ಯಾಧಿಕಾರಿ ಮಹೇಶ ಹಡಪದ ಕಾಮಗಾರಿಯ ಕುರಿತು ಸಚಿವರಿಗೆ ಮಾಹಿತಿ ನೀಡಿ, ‘ಶೇ 90ರಷ್ಟು ಕೆಲಸ ಮುಗಿದಿದೆ. ಉಳಿದ ಕೆಲಸವನ್ನು ಬೇಗನೇ ಮುಗಿಸಲಾಗುವುದು’ ಎಂದರು.

ADVERTISEMENT

ಪುರಸಭೆ ಸದಸ್ಯರಾದ ಪ್ರವೀಣ ಬಾಳಿಕಾಯಿ, ಮಹೇಶ ಹೊಗೆಸೊಪ್ಪಿನ ಮಾತನಾಡಿ, ‘ಲಕ್ಷ್ಮೇಶ್ವರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸೂರಣಗಿಯಿಂದ ಹೊಸ ಪೈಪ್‍ಲೈನ್ ಅಳವಡಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ. ಈ ನಿಟ್ಟಿನಲ್ಲಿ ಸಚಿವರು ಮುತುವರ್ಜಿ ವಹಿಸಿ ಅನುದಾನ ಬಿಡುಗಡೆ ಮಾಡಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣನವರ, ಉಪಾಧ್ಯಕ್ಷ ಫಿರ್ದೋಷ ಅಡೂರ, ಸದಸ್ಯರಾದ ಬಸವರಾಜ ಓದುನವರ, ಮುಸ್ತಾಕ್ ಅಹ್ಮದ ಶಿರಹಟ್ಟಿ, ಸಿಕಂದರ್ ಕಣಕೆ, ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ, ಮುಖಂಡರಾದ ಗುರುನಾಥ ದಾನಪ್ಪನವರ, ಚನ್ನಪ್ಪ ಜಗಲಿ, ರಫೀಕ ಕಲಬುರ್ಗಿ, ದೀಪಕ್ ಲಮಾಣಿ, ಪಕ್ಕೀರೇಶ ನಂದೆಣ್ಣನವರ, ದಾದಾಪೀರ ಮುಚ್ಚಾಲೆ, ಅಣ್ಣಪ್ಪ ರಾಮಗೇರಿ, ತಿಪ್ಪಣ್ಣ ಸಂಶಿ, ಸಿದ್ದು ದುರಗಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.