ADVERTISEMENT

ಗದಗ: ಪ್ರವಾಸೋದ್ಯಮ ದಿನ: ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 16:17 IST
Last Updated 27 ಸೆಪ್ಟೆಂಬರ್ 2020, 16:17 IST
ಗದುಗಿನಲ್ಲಿ ಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಭಾನುವಾರ ಚಾಲನೆ ನೀಡಿದರು
ಗದುಗಿನಲ್ಲಿ ಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಭಾನುವಾರ ಚಾಲನೆ ನೀಡಿದರು   

ಗದಗ: ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಸಂದೇಶದ ಜಾಗೃತಿ ರಥಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಭಾನುವಾರ ಚಾಲನೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಪ್ರವಾಸಿ ಮಿತ್ರರು, ಗಣ್ಯರು ಇದ್ದರು.

ಮುಳಗುಂದ ನಾಕಾ, ಜುಮ್ಮಾ ಮಸೀದಿ ಸರ್ಕಲ್‌, ಗಾಂಧಿ ವೃತ್ತ, ರೋಟರಿ ವೃತ್ತ, ಹಳೆ ಡಿಸಿ ಆಫೀಸ್‌ ವೃತ್ತದ ಮೂಲಕ ಭೀಷ್ಮ ಕೆರೆಯ ಬಸವೇಶ್ವರ ಪುತ್ಥಳಿವರೆಗೆ ಬಂದು ಜಾಥಾ ಮುಕ್ತಾಯಗೊಂಡಿತು.

ADVERTISEMENT

ಬಸವೇಶ್ವರ ಪುತ್ಥಳಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.