ಗಜೇಂದ್ರಗಡ: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ತಂಡ ಜಯ ಸಾಧಿಸಿದ ಅಂಗವಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಯುವಕರು ಪಟಾಕಿ ಸಿಡಿಸಿ, ಕುಣಿದು ಸಂಭ್ರಮಿಸಿದರು.
ಫೈನಲ್ ಪಂದ್ಯ ವೀಕ್ಷಣೆಗೆ ಪಟ್ಟಣದ ಜೋಡು ರಸ್ತೆಯಲ್ಲಿ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿತ್ತು. ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿಯೂ ಯುವಕರು ಪಂದ್ಯ ವೀಕ್ಷಣೆಗೆ ಟಿವಿ ಅಳವಡಿಸಿದ್ದರು. ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿದ ಬಳಿಕ ಯುವಕರು ಪಟಾಕಿ ಸಿಡಿಸಿ, ಕುಣಿದು ಸಂಭ್ರಮಿಸಿದರು. ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಸಾವಿರಾರು ಯುವಕರು ಕೇಕೆ ಹಾಕಿ ಕುಣಿದು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.