ಜಾವಗಲ್: ಅರಕೆರೆ ಗ್ರಾಮಕ್ಕೆ ಸುವರ್ಣ ಗ್ರಾಮ ಯೋಜನೆಯಡಿ ರೂ 60ಲಕ್ಷ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ಶೀಘ್ರದಲ್ಲಿ ಆರಂಭವಾಗಲಿವೆ ಎಂದು ಎಂದು ಶಾಸಕ ವೈ,ಎನ್. ರುದ್ರೇಶಗೌಡ ತಿಳಿಸಿದರು.
ಜಾವಗಲ್ ಸಮೀಪದ ಅರಕೆರೆ ಗ್ರಾಮದಲ್ಲಿ ಶುಕ್ರವಾರ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಉದ್ಘಾಟನೆ ಮತ್ತು ಸುವರ್ಣ ಗ್ರಾಮ ಯೋಜನೆಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಬಾಕ್ಸ್ ಚರಂಡಿ ಸಮುದಾಯ ಭವನ, ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವುದಾಗಿ ತಿಳಿಸಿದರು
ತಾಲ್ಲೂಕು ಪಂಚಾಯಿತಿ ಸದಸ್ಯೆ ರಾಜೇಶ್ವರಿ, ಎ.ಪಿ.ಎಂ.ಸಿ ನಿರ್ದೇಶಕ ಕಲ್ಲಹಳ್ಳಿ ನಾಗರಾಜು ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಬೆಳುವಳ್ಳಿ ಮಹದೇವ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನೇರ್ಲಿಗೆ ಸೋಮಶೇಖರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ ಸ್ವಾಮಿ , ಪುಟ್ಟಸ್ವಾಮಿ ಗ್ರಾಮ ಪಂಚಾ ಯಿತಿ ಮಾಜಿ ಅಧ್ಯಕ್ಷ ಸಂಕೀಹಳ್ಳಿ ಚನ್ನಬಸಪ್ಪ ಮಾತನಾಡಿದರು.
ಹಾವು ಕಚ್ಚಿ ಮೃತರಾದ ಲಚ್ಚಾನಾಯಕ ಅವರ ಪತ್ನಿ ಹೀರಾ ಬಾಯಿ ಅವರಿಗೆ ಕೃಷಿ ಇಲಾಖೆ ವತಿಯಿಂದ 1ಲಕ್ಷ ಚೆಕ್‌ವಿತರಿಸಲಾ ಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಸಿ. ತಿಮ್ಮಪ್ಪ ಅಧ್ಯಕ್ಷತೆ ್ನವಹಿಸಿದ್ದರು.
ಮಾರಗೊಂಡನಹಲ್ಲಿ ವಿರಕ್ತಮಠದ ಬಸವಲಿಂಗ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣ್ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲೋಲಾಕ್ಷಮ್ಮ, ಲಕ್ಷ್ಮೀರವಿಶಂಕರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೀತಾ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಸವರಾಜು ಕೃಷಿ ಇಲಾಖೆ ಅಧಿಕಾರಿ ಕುಮಾರಸ್ವಾಮಿ, ಕಾರ್ಯದರ್ಶಿ ಸಾವಿತ್ರಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.