ADVERTISEMENT

ಆನೆ ಹಾವಳಿ: ಆತಂಕದಲ್ಲಿ ಜನತೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 5:35 IST
Last Updated 6 ಜನವರಿ 2014, 5:35 IST

ಆಲೂರು: ತಾಲ್ಲೂಕಿನ ಪಾಳ್ಯ ಮತ್ತು ಕುಂದೂರು ಹೋಬಳಿಗಳ ಅರಣ್ಯ ಪ್ರದೇಶದಲ್ಲಿ ವಾಸ್ತವ್ಯ ಹೂಡಿರುವ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಆತಂಕದಲ್ಲಿ ಬದುಕು ನಡೆಸುವಂತಾಗಿದೆ ಎಂದು ತಾಲ್ಲೂಕು ಜನವಿಕಾಸ ಸಮಿತಿ ಅಧ್ಯಕ್ಷ ಎನ್.ಡಿ. ದೇವರಾಜ್ ತಿಳಿಸಿದರು.

ಪಟ್ಟಣದ ಸೆಸ್ಕ್‌ ಕಚೇರಿಯಲ್ಲಿ ಗಂಟೆಗೊಮ್ಮೆ ವಿದ್ಯುತ್ ಕಡಿತ ಮಾಡುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಮನೆಯಿಂದ ಹೊರಗಿದ್ದು ಆನೆಗಳ ಭೀತಿಯಿಂದಾಗಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ಕಡಿತದಿಂದಾಗಿ ಕುಡಿಯುವ ನೀರು ಬಿಡುವ ಸಮಯದಲ್ಲಿ ವ್ಯತ್ಯಾಸವಾಗಿ ಜನರು ಬವಣೆ ಪಡುತ್ತಿದ್ದಾರೆ ಎಂದರು.

ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳು ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಕಾರಗೋಡು ಗ್ರಾಮಪಂಚಾಯಿತಿ ಸದಸ್ಯರು ಹಾಜರಿದ್ದರು.

ಕಾರ್ಯದರ್ಶಿಯಾಗಿ ಸಲೀಂ ನೇಮಕ
ಸಕಲೇಶಪುರ:  ತಾಲ್ಲೂಕು ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ  ಕೊಲ್ಲಹಳ್ಳಿ ಸಲೀಂ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ತಾಲ್ಲೂಕು ಅಧ್ಯಕ್ಷ ವಿದ್ಯಾಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.