ಅರಸೀಕೆರೆ: ತಾಲ್ಲೂಕಿನ ಜೆಸಿಪುರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶ್ರೀಧರ್ ಮತ್ತು ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಯನ್ನು ವಿರೋಧಿಸಿ ಅವರನ್ನು ಆಸ್ಪತ್ರೆಯೊಳಗೆ ಕೂಡಿಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ.
ಗ್ರಾಮದ ಸತೀಶ್‌ರಾವ್ ಅವರ ಮಗುವಿನ ಮಂಗಳವಾರ ಕಿವಿಗೆ ಪೆಟ್ಟು ಬಿದ್ದಿತ್ತು. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋದಾಗ ವೈದ್ಯರು ಚಿಕಿತ್ಸೆ ನೀಡಲು ನಿರ್ಲಕ್ಷ್ಯ ತೋರಿದರು ಎನ್ನಲಾಗಿದೆ. ನಂತರ ಮಗುವನ್ನು ಅರಸೀಕೆರೆ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ಗ್ರಾಮಸ್ಥರು ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಹರಿಹಾಯಲು ಕಾರಣವಾಗಿದೆ.
ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಉದ್ರಿಕ್ತರು ಆಸ್ಪತ್ರೆ ಬಾಗಿಲು, ಕಿಟಕಿ ಗಾಜಗಳಿಗೆ ಹಾನಿ ಮಾಡಿದ್ದಾರೆ. ತಾಲ್ಲೂಕು ಹಸಿರು ಸೇನೆ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು, ಮುಖಂಡರಾದ ಶಂಭುಲಿಂಗಪ್ಪ, ಈಶ್ವರಪ್ಪ ಪ್ರತಿಭಟನೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.