ADVERTISEMENT

ಉನ್ನತ ವಿದ್ಯಾಭ್ಯಾಸ ಕೈಗೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 1 ಮೇ 2012, 8:05 IST
Last Updated 1 ಮೇ 2012, 8:05 IST

ಹೊಳೆನರಸೀಪುರ:  ಹೆಣ್ಣುಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿ ತಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಭವಾನಿ ರೇವಣ್ಣ ನುಡಿದರು.

ಇಲ್ಲಿನ ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ 2012 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಯೋಜನೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ಷೇತ್ರದ ಶಾಸಕರಾದ ರೇವಣ್ಣನವರು ಸಚಿವರಾಗಿದ್ದಾಗ ತಾವು ಸಚಿವ ಎನ್ನುವ ಹಮ್ಮು ತೋರದೆ ವಿಧಾನ ಸೌಧದಲ್ಲಿ ಫೈಲ್‌ಗಳನ್ನು ಹಿಡಿದು ಓಡಾಡಿದ್ದರಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಯಿತು ಎಂದು ತಿಳಿಸಿ ರೇವಣ್ಣ ಅವರ ಕಾರ್ಯವೈಖರಿಯನ್ನು ಹೊಗಳಿದರು.

ADVERTISEMENT

ಪ್ರಾಂಶುಪಾಲ ಬಸವಣ್ಣ ಮಾತನಾಡಿ, ಕಾಲೇಜಿನ ಫಲಿತಾಂಶ ಹಾಗೂ ಕಾಲೇಜಿನಲ್ಲಿ ನಡೆದ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿನಿಯರಿಗೆ ವಕೀಲ ತಾಂಡವೇಶ್ವರ್ ಬಹುಮಾನ ವಿತರಿಸಿದರು. ಎನ್‌ಎಸ್‌ಎಸ್ ಅಧಿಕಾರಿ ರಾಜಶೇಖರ್ ವಾರ್ಷಿಕ ವರದಿ ಓದಿದರು. ಸಿಂಧು ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.