ADVERTISEMENT

ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 9:15 IST
Last Updated 23 ಸೆಪ್ಟೆಂಬರ್ 2011, 9:15 IST

ಹಾಸನ: ಹಾಸನದ ವಿವಿಧ ಭಾಗಗಳಲ್ಲಿ ಕಾನೂನು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರಕ್ಕೆ ಬಂದಿರುವ ಕಾನೂನು ರಥದ ಕಾರ್ಯಕ್ರಮಗಳಿಗೆ ಗುರುವಾರ ಚಾಲನೆ ನೀಡಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಕಾನೂನು ಕಾಲೇಜು, ಎಂ.ಕೃಷ್ಣ ಕಾನೂನು ಕಾಲೇಜು, ಸರ್ಕಾರಿ ಕಲಾ ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು, ಚಿಪ್ಪಿನಕಟ್ಟೆ ಹಾಗೂ ಡಯಟ್, ಹಾಸನ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 22ರಿಂದ 24ರವರೆಗೆ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ.ಚಂಗಪ್ಪ ಕಾನೂನು ಸಾಕ್ಷರತಾ ರಥಕ್ಕೆ ಹಸಿರು ನಿಶಾನೆ ತೋರಿಸಿದರು.

ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಪಾಲಾಕ್ಷಪ್ಪ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ವಿ.ಕೊಸಂದರ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಲ್.ಎನ್. ನರಸಿಂಹಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.