
ಹಾಸನ: ಅರಸೀಕೆರೆ ತಾಲ್ಲೂಕು ಜಾವಗಲ್ ಹೋಬಳಿ ಕುಂದೂರು ಗ್ರಾಮದಲ್ಲಿ ಕೆರೆಯ ಹೂಳೆತ್ತುವುದರಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
`ಕೆರೆ ಹೂಳೆತ್ತುವ ಕಾಮಗಾರಿ ಪೂರ್ಣವಾಗಿಲ್ಲ. ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದು, ಕಾಮಗಾರಿಯ ಬಗ್ಗೆ ಕೇಳಲು ಹೋದರೆ ಗುತ್ತಿಗೆದಾರ ಅವಾಚ್ಯಚಾಗಿ ನಿಂದಿಸುತ್ತಾರೆ. ಮಾಡಿರುವ ಕಾಮಗಾರಿಯೂ ಸರಿಯಾಗಿಲ್ಲ. ಹಿಂದೆ ತೆಗೆದಿದ್ದ ಗುಂಡಿಗಳನ್ನು ಮುಚ್ಚಿ ಅದನ್ನೇ ಕಾಮಗಾರಿ ಎಂದು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಒಟ್ಟಾರೆ 22 ಲಕ್ಷ ರೂಪಾಯಿಯ ಕಾಮಗಾರಿಯಲ್ಲಿ ಐದು ಲಕ್ಷ ರೂಪಾಯಿಯ ಕಾಮಗಾರಿ ಮಾತ್ರ ನಡೆದಿದೆ. ಯಾವುದೇ ಕಾರಣಕ್ಕೂ ಕಾಮಗಾರಿ ಪೂರ್ಣವಾಗದೆ ಬಿಲ್ ನೀಡಬಾರದು ಎಂದು ಅವರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.