ಅರಸೀಕೆರೆ: ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದರೂ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಹಾದು ಹೋಗಿರುವ ಬಿ.ಎಚ್. ರಸ್ತೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲ್ಲೂಕು ಕಚೇರಿ ಸಮೀಪ ಮುಖ್ಯಮಂತ್ರಿ ಮತ್ತು ಸಚಿವರ ಭಾವಚಿತ್ರಗಳಿರುವ ಪ್ರಚಾರ ಫಲಕಗಳು ರಾರಾಜಿಸುತ್ತಿವೆ.
ಚುನಾವಣಾ ನೀತಿ ಸಂಹಿತೆ ಪ್ರಕಾರ, ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ ಹಾಗೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಫ್ಲೆಕ್ಸ್, ಬ್ಯಾನರ್, ನಾಮಫಲಕಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಅರಸೀಕೆರೆ ಪಟ್ಟಣದಲ್ಲಿ ಅದು ಜಾರಿಯಾಗಿಲ್ಲ ಎಂಬುದಕ್ಕೆ ಇನ್ನೂ ತೆರವುಗೊಳಿಸದ ಫ್ಲೆಕ್ಸ್‌ಗಳು ಸಾಕ್ಷಿಯಾಗಿವೆ.
ಪಟ್ಣಣ ಸೇರಿದಂತೆ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಇಂದಿಗೂ ಜಾಹೀರಾತು, ಶುಭಾಶಯ ಕೋರುವ ಜನಪ್ರತಿನಿಧಿಗಳ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕಗಳು ಕಣ್ಣಿಗೆ ರಾಚುತ್ತಿವೆ. ಚುನಾವಣಾ ಆಯೋಗದ ನೀತಿಸಂಹಿತೆಯನ್ನು ಪಾಲಿಸಬೇಕಾದ ತಾಲ್ಲೂಕು ಆಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.