ADVERTISEMENT

ದಸರಾ ನಮ್ಮ ಸಂಸ್ಕೃತಿಯ ಪ್ರತಿಬಿಂಬ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 6:05 IST
Last Updated 18 ಅಕ್ಟೋಬರ್ 2012, 6:05 IST

ಅರಕಲಗೂಡು: ವಿಜಯದಶಮಿ ಉತ್ಸವ ನಮ್ಮ ಸಂಸ್ಕೃತಿಯ ಪ್ರತೀಕ. ಇದನ್ನು ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಶಾಸಕ ಎ.ಮಂಜು ಹೇಳಿದರು.

ಪಟ್ಟಣದ ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದ ಆವರಣ ದಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಅರಕಲಗೂಡು ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಸರಾ ಮೆರವಣಿಗೆಯಲ್ಲಿ ಪಾಲ್ಗೊ ಳ್ಳುವ ಎಲ್ಲ ದೇವತೆಗಳ ಉತ್ಸವಗಳ ಅಲಂಕಾರಕ್ಕೆ ಅಗತ್ಯವಾದ ಧನ ಸಹಾಯ ನೀಡುವುದಾಗಿ ತಿಳಿಸಿದರು.

ದಸರಾ ಸಮಿತಿ ಅಧ್ಯಕ್ಷ ಹಾಗೂ ಚಿಲುಮೆ ಮಠದ ಮಠಾಧೀಶ ಜಯದೇವ ಸ್ವಾಮೀಜಿ, ಅರೆಮಾದನ ಹಳ್ಳಿ ಮೂಲ ಮಠದ ಶಿವಸುಜ್ಞಾನ ಮೂರ್ತಿ ಸ್ವಾಮೀಜಿ, ದೊಡ್ಡಮಠದ ಮಠಾಧೀಶ ಮಲ್ಲಿಕಾರ್ಜುನ ಸ್ವಾಮೀಜಿ ವಿಜಯ ದಶಮಿ ಉತ್ಸವದ ಸಂಕೇತ ಹಾಗೂ ಮಹತ್ವದ ಬಗ್ಗೆ ವಿವರಿಸಿ ಆಶೀರ್ವಚನ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಎಸ್.ಯೋಗೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಗೋಪಾಲ್, ದೊಡ್ಡಮ್ಮ ದೇವಾಲಯ ಸಮಿತಿ ಅಧ್ಯಕ್ಷ ಎ.ಎಸ್. ರಾಮಸ್ವಾಮಿ ಉಪಸ್ಥಿತರಿದ್ದರು. ಉತ್ಸವ ಸಮಿತಿ ಕಾರ್ಯದರ್ಶಿ ಎ.ಪಿ. ಶಂಕರ್ ಸ್ವಾಗತಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.