ADVERTISEMENT

`ನೀರಿನ ಸಮಸ್ಯೆ ಪರಿಹರಿಸಲು ಮನವಿ'

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2012, 5:54 IST
Last Updated 22 ಡಿಸೆಂಬರ್ 2012, 5:54 IST

ಹಿರೀಸಾವೆ: ಹೋಬಳಿಯು ಸೇರಿದಂತೆ ಚನ್ನರಾಯಪಟ್ಟಣ ತಾಲ್ಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಕಾಣಿಸಿಕೊಂಡಿದ್ದು, ಹೇಮಾವತಿ ನದಿಯಿಂದ ನೀರು ಒದಗಿಸಲು ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಹಾಸನ ಜಿಲ್ಲಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಮತ್ತು ಜೆಡಿಎಸ್ ಮುಖಂಡ ಸಿ.ಎನ್.ಬಾಲಕೃಷ್ಣ ಹಿರೀಸಾವೆಯಲ್ಲಿ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನುಗ್ಗೇಹಳ್ಳಿ ಹೋಬಳಿಗೆ ಮಂಜೂರು ಮಾಡಿರುವ ಯೋಜನೆಯ ಮಾದರಿಯಲ್ಲಿಯೇ ಹೇಮಾವತಿ ನದಿಯಿಂದ ನಾಲ್ಕು ಪೈಪ್‌ಲೈನ್ ಮೂಲಕ 25 ಗ್ರಾಮ ಪಂಚಾಯಿತಿಗಳ ಹಲವು ಗ್ರಾಮಗಳ ಕೆರೆಗಳಿಗೆ ನೀರು ಹರಿಸುವಂತೆ ಮುಂದಿನ ವಾರದಲ್ಲಿ ತಾಲ್ಲೂಕಿನ ಎ್ಲ್ಲಲ ಜನ ಪ್ರತಿನಿಧಿಗಳ ಜೊತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಬಾಗೂರು ಏತ ನೀರಾವರಿ ಯೋಜನೆಯನ್ನು ಇನ್ನೂ ಹೆಚ್ಚು ಅಭಿವೃದ್ಧಿ ಪಡಿಸುವಂತೆ ಸರ್ಕಾರವನ್ನು ಒತ್ತಾಯ ಮಾಡುವುದಾಗಿ ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಿ.ಜಿ.ಅಂಬಿಕಾ ರಾಮಕೃಷ್ಣ ಮಾತನಾಡಿ, ಜಿಲ್ಲಾ ಪಂಚಾಯಿತಿ ವತಿಯಿಂದ ಕುಡಿಯುವ ನೀರು ಕರಡು ಯೋಜನೆ ತಯಾರಿಸಿ, ಸರ್ಕಾರಕ್ಕೆ ತಲುಪಿಸಲಾಗುವುದು. ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಅವರು ಹೊಸದಾಗಿ ಬೋರ್‌ವೆಲ್‌ಗಳನ್ನು ತೆಗೆಸಲು, ಅನುಮತಿ ಮತ್ತು ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.