ADVERTISEMENT

ನುಗ್ಗೇಹಳ್ಳಿ ಏತ ನೀರಾವರಿ; ಕಾಮಗಾರಿ ಶೀಘ್ರ ಪೂರ್ಣ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 6:45 IST
Last Updated 28 ಅಕ್ಟೋಬರ್ 2017, 6:45 IST

ಚನ್ನರಾಯಪಟ್ಟಣ: ‘ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದ ವಿಧಾನ ಪರಿಷತ್ತು ಸದಸ್ಯ ಎಂ.ಎ. ಗೋಪಾಲಸ್ವಾಮಿ ಹೇಳಿದರು. ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಈಚೆಗೆ ಹೊಯ್ಸಳ ಯುವಕ ಸಂಘ ಏರ್ಪಡಿಸಿದ್ದ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೀರಾವರಿ ಯೋಜನೆ ಜಾರಿಯಿಂದ ಈ ಭಾಗದ16 ಕೆರೆಗಳಿಗೆ ನೀರು ತುಂಬಿಸಲಿದ್ದು, ಅಂತರ್ಜಲ ವೃದ್ಧಿ, ನೀರು ಕಲ್ಪಿಸಲು ಅನುಕೂಲ ಎಂದರು.

ಎಪಿಎಂಸಿ ನಿರ್ದೇಶಕ ಎಂ.ಶಂಕರ್, ‘ಹೊಯ್ಸಳ ಯುವಕ ಸಂಘ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ, ಸಾಮಾಜಿಕ ಕಾಳಜಿ ಇರುವ ಕಾರ್ಯಕ್ರಮ ರೂಪಿಸುತ್ತಿದೆ’ ಎಂದು ಶ್ಲಾಘಿಸಿದರು.

ಈ ಸಂದರ್ಭ ರಂಗೋಲಿ ಸ್ಪರ್ಧೆ ನಡೆಯಿತು. ಪರಿಸರವಾದಿ ಸಿ.ಎನ್‌. ಅಶೋಕ್ ಅವರನ್ನು ಸನ್ಮಾನಿಸಲಾಯಿತು. ತಾ.ಪಂ ಮಾಜಿ ಉಪಾಧ್ಯಕ್ಷ ಎಚ್‌.ಜೆ. ಕಿರಣ್‌, ಮುಖಂಡರಾದ ಎನ್.ಪಿ. ರವಿ, ಎನ್‌.ಎಸ್‌. ಪ್ರಕಾಶ್, ಶೇಖರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.