ADVERTISEMENT

ಪೊಲೀಸರ ಕ್ರಮ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 7:46 IST
Last Updated 5 ಏಪ್ರಿಲ್ 2013, 7:46 IST

ಹಾಸನ: ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಒತ್ತಾ ಯಿಸಿ ಶಾಂತಿಯುತ ಪ್ರತಿಭಟನೆ ನಡೆ ಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ರುವುದನ್ನು ಮತ್ತು ಪೊಲೀಸ್ ಕಸ್ಟಡಿಯಲ್ಲಿ ವಿದ್ಯಾರ್ಥಿಯೊಬ್ಬ ಮೃತ ಪಟ್ಟ ಘಟನೆಯನ್ನು ಖಂಡಿಸಿ ಹಾಸನ ದಲ್ಲಿ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, `ಎಸ್.ಎಫ್.ಐನ ಪಶ್ಚಿಮ ಬಂಗಾಳ ರಾಜ್ಯ ಸಮಿತಿ ಸದಸ್ಯ, 23 ವರ್ಷದ ಸುದೀಪ್ತೋ ಗುಪ್ತ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಕೂಡಲೇ ರಾಜಿನಾಮೆ ನೀಡಬೇಕು' ಎಂದು ಒತ್ತಾಯಿಸಿದರು.

`ಘಟನೆಗೆ ಸಂಭಂಧಿಸಿದಂತೆ ಕೂಡಲೆ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ತರಿಗೆ ಶಿಕ್ಷೆ ನೀಡಬೇಕು ಮತ್ತು ಮೃತಪಟ್ಟಿರುವ ಸುದೀಪ್ತೋ ಗುಪ್ತನ ಆಶಯದಂತೆ ರಾಜ್ಯದಲ್ಲಿ ನ್ಯಾಯ ಸಮ್ಮತವಾಗಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಮಮತಾ ಬ್ಯಾನರ್ಜಿ ಹಾಗೂ ಪೊಲೀಸರ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಬಳಿಕ ಮಮತಾ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಎಫ್‌ಐ ಜಿಲ್ಲಾ ಘಟಕದ ಕಾರ್ಯದರ್ಶಿ ಪೃಥ್ವಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ನವೀನ್ ಕುಮಾರ್, ಡಿವೈಎಫ್‌ಐ ಕಾರ್ಯದರ್ಶಿ ಶಾವೆಲ್ ಹಮೀದ್. ಮಂಜುನಾಥ್. ಪ್ರದೀಪ್, ಅನ್‌ಷಾದ್, ವಿಜಯೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.